ಬೆಂಗಳೂರು: ರಾಜ್ಯದ ಮಧುಮೇಹಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಿದರು. ಈ ಮೂಲಕ ಮಧುಮೇಹಿಗಳ ಸೇವೆಗೆ ಡಯಾಲಿಸಿಸ್ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು.
ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವಂತ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಚಿತ ಡಯಾಲಿಸಿಸ್ ಸೇವೆಗಳಿಗೆ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರೇ, ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗಿಯಾಗಿದ್ದರು.
ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ 108 ಕೋಟಿಯಾಗಿದೆ. ಇವುಗಳಿಂದ 7.20 ಲಕ್ಷ ವಾರ್ಷಿಕ ಡಯಾಲಿಸಿಸ್ ಸೈಕಲ್ ಗಳು ನಡೆಯಲಿವೆ.
ಇದಷ್ಟೇ ಅಲ್ಲದೇ ಡಯಾಲಿಸಿಸ್ ಗುಣಮಟ್ಟ ಹೆಚ್ಚಿಸಲು ಏಕ ಬಳಕೆಯ ಡಯಾಲೈಸರ್ ಅಳವಡಿಸಲಾಗಿದೆ. ಈ ಮೂಲಕ ಡಯಾಲಿಸಿಸ್ ರೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಲಾಗಿದೆ.
BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್