ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25 ನೇ ಸಾಲಿಗಾಗಿ ಬ್ಯಾಟರಿ ಚಾಲಿತ ವೀಲ್‍ಚೇರಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆಯದೇ ಇರುವ 15 ವರ್ಷ ಮೇಲ್ಪಟ್ಟ, ದೈಹಿಕ ವಿಕಲಚೇತನರಿಂದ ಆನ್‍ಲೈನ್ ಮೂಲಕ ಸೇವಾ ಸಿಂಧು ವೆಬೆ ಸೈಟ್ https://suvidha.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಜನೆವರಿ 21, 2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕಾ ಪಂಚಾಯತದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ಆರ್.ಡಬ್ಲ್ಯೂಗಳನ್ನು ಬೇಟಿ ಮಾಡಬಹುದು ಅಥವಾ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯದ ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಉತ್ಪನ್ನ ಖರೀದಿ, ಈ ದಾಖಲೆಗಳು ಕಡ್ಡಾಯ
BIG UPDATE : ಕರ್ನಾಟಕದಲ್ಲಿ 2 ‘HMPV’ ಸೋಂಕು ಧೃಡ : ‘ICMR’ ಸ್ಪಷ್ಟನೆ | HMPV VIRUS