ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಶೇ.40 ರಿಂದ 74 ರಷ್ಟು ವಿಕಲಚೇತನರಿಗೆ ₹800, 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ₹1,400 ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ₹2,000 ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ.ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು.ವಿಕಲಚೇತನರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಬಜೆಟ್‌ನಲ್ಲಿ ₹44 ಕೋಟಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.