Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿರಿಯಾದಲ್ಲಿರುವ ‘ಯುಎಸ್ ಮಿಲಿಟರಿ ನೆಲೆ’ಯ ಮೇಲೆ ‘ಇರಾನ್’ ದಾಳಿ : ವರದಿ

23/06/2025 9:11 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

BREAKING : ಅಮೆರಿಕದ ದಾಳಿ ಪ್ರತೀಕಾರಕ್ಕೆ ಇರಾನ್ ಸಜ್ಜು, ಮುಂದಿನ 48 ಗಂಟೆಗಳಲ್ಲಿ ಭಯಾನಕ ದಾಳಿ ಸಾಧ್ಯತೆ : ವರದಿ

23/06/2025 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ‘KSRTC’ಯಿಂದ ಹೆಚ್ಚುವರಿಯಾಗಿ ‘2000 ಬಸ್’ ವ್ಯವಸ್ಥೆ | KSRTC Bus Service
KARNATAKA

‘ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ‘KSRTC’ಯಿಂದ ಹೆಚ್ಚುವರಿಯಾಗಿ ‘2000 ಬಸ್’ ವ್ಯವಸ್ಥೆ | KSRTC Bus Service

By kannadanewsnow0927/10/2024 5:20 AM

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಅದೇ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 2000 ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.10.2024 ರಿಂದ 01.11.2024 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದಿದೆ.

ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.11.2024 ಹಾಗೂ 04.11.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ.

• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
• ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿಸಿ ತಿಳಿಸಿದೆ.

Share. Facebook Twitter LinkedIn WhatsApp Email

Related Posts

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM3 Mins Read

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ: DKS

23/06/2025 8:52 PM1 Min Read

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM1 Min Read
Recent News

BREAKING : ಸಿರಿಯಾದಲ್ಲಿರುವ ‘ಯುಎಸ್ ಮಿಲಿಟರಿ ನೆಲೆ’ಯ ಮೇಲೆ ‘ಇರಾನ್’ ದಾಳಿ : ವರದಿ

23/06/2025 9:11 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

BREAKING : ಅಮೆರಿಕದ ದಾಳಿ ಪ್ರತೀಕಾರಕ್ಕೆ ಇರಾನ್ ಸಜ್ಜು, ಮುಂದಿನ 48 ಗಂಟೆಗಳಲ್ಲಿ ಭಯಾನಕ ದಾಳಿ ಸಾಧ್ಯತೆ : ವರದಿ

23/06/2025 9:03 PM

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ: DKS

23/06/2025 8:52 PM
State News
KARNATAKA

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

By kannadanewsnow0923/06/2025 9:05 PM KARNATAKA 3 Mins Read

ತುಮಕೂರು : ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.…

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ: DKS

23/06/2025 8:52 PM

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

23/06/2025 8:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.