ನವದೆಹಲಿ : ಕಳೆದ ವರ್ಷ ಭೀಕರ ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ವರ್ಷ ವಾಡಿಕೆಗಿಂತ ಅಧಿಕ ಮಾನ್ಸೂನ್ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ನೈಋತ್ಯ ಮಾನ್ಸೂನ್ ( southwest monsoon ) ಮೇ 31 ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದು ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ನಿರ್ಣಾಯಕವಾದ ನಾಲ್ಕು ತಿಂಗಳ ಮಳೆ ಋತುವಿಗೆ ವೇದಿಕೆಯನ್ನು ಕಲ್ಪಿಸುತ್ತದೆ. “ಈ ವರ್ಷ, ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ” ಎಂದು ಭಾರತ ಹವಾಮಾನ ಇಲಾಖೆ ( India Meteorological Department-IMD) ತಿಳಿಸಿದೆ.
ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಜೂನ್, ಜುಲೈ, ಆಗಸ್ಟ್ ಹಾಗೂ ಸೆಪ್ಟಂಬರ್ ತಿಂಗಳುಗಳೇ ನಿರ್ಣಾಯಕ. ಈ ನಾಲ್ಕು ತಿಂಗಳು ಮಳೆಗಾಲಕ್ಕೆ ಉತ್ತಮ ವೇದಿಕೆಯಾಗಿದೆ. ಈ ಬಾರಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ.