ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಮಾರ್ಚ್ 31ರ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮಾರ್ಚ್ 31 ರಿಂದ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಉತ್ತರ ಕರ್ನಾಟಕ ಭಾಗದ ಬೀದರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.