ಸಮಾಜ ಕಲ್ಯಾಣ ಇಲಾಖೆಯಿಂದ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇನ್‌ಟೆಲಿಜೆನ್ಸ್ & ಮಷಿನ್ ಲರ್ನಿಂಗ್ (Artificial Intelligence and Machine Learning) ವೃತ್ತಿಪರ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ, ತರಬೇತಿ ನೀಡುವ ಸಂಬಂಧ ಅರ್ಜಿ ಸಲ್ಲಿಸಲಾಗಿದೆ.
ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇನ್‌ಟೆಲಿಜೆನ್ಸ್ & ಮಷಿನ್ ಲರ್ನಿಂಗ್ ವೃತ್ತಿಪರ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ. 15,000 ಗಳ ಶಿಷ್ಯವೇತನ ನೀಡಲಾಗುವುದೆಂದು ಕೆಲವು ಷರತ್ತುಗಳಿಗೊಳಪಟ್ಟು ನಿರ್ದೇಶಕರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ರವರು ಮಂಜೂರಾತಿ ನೀಡಿ ಆದೇಶಿಸಿರುತ್ತಾರೆ. ಕೊಪ್ಪಳ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಏಪ್ರಿಲ್ 11 ರವರೆಗೆ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಿ ಕೇಂದ್ರ ಕಛೇರಿಗೆ ಸಲ್ಲಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿಗಳಿಗಾಗಿ ಕೊಪ್ಪಳ ಜಿಲ್ಲೆಯ ಆಯಾ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.