ದಾವಣಗೆರೆ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಜಿಲ್ಲೆಗೆ ಭೌತಿಕ 19, ಆರ್ಥಿಕ ರೂ.34 ಲಕ್ಷಗಳ ಗುರಿ ಸೇರಿದಂತೆ ಒಟ್ಟು 67 ಭೌತಿಕ ಗುರಿ ನಿಗದಿಪಡಿಸಿದ್ದು, ಗ್ರಾಮೀಣ ಪ್ರದೇಶದ ಘಟಕ ವೆಚ್ಚ ರೂ.1.75 ಲಕ್ಷ ಹಾಗೂ ನಗರ ಪ್ರದೇಶದ ರೂ.2 ಲಕ್ಷಗಳ ಘಟಕ ವೆಚ್ಚದಲ್ಲಿ ರಾಜೀವಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯವನ್ನು ಒದಗಿಸಲಾಗುವುದು.
ಅರ್ಹರು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ 1 ಜನವರಿ 2025 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-222117 ಗೆ ಸಂಪರ್ಕಿಸಲು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಪ್ರಾದೇಶಿಕ ಸಾರಿಗೆ ಶಿಬಿರ
2025ನೇ ವರ್ಷದಲ್ಲಿ ದಾವಣಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಶಿಬಿರಗಳನ್ನು ಆಯೋಜಿಸಲಾಗಿದೆ.
ಪ್ರತಿ ತಿಂಗಳು 5 ನೇ ತಾರೀಖಿನಂದು ಮಲೇಬೆನ್ನೂರಿನ ನೀರಾವರಿ ಇಲಾಖೆಯ ಸಬ್ ಡಿವಿಜನ್ ಕಚೇರಿ ಆವರಣ ಮತ್ತು ಹರಿಹರದ ಎ.ಪಿ.ಎಂ.ಸಿ ಆವರಣ. ಪ್ರತಿ ತಿಂಗಳು 10ನೇ ತಾರೀಖಿನಂದು ಚನ್ನಗಿರಿ ಎ.ಪಿ.ಎಂ.ಸಿ ಆವರಣ, ಪ್ರತಿ ತಿಂಗಳು 20ನೇ ತಾರೀಖಿನಂದು ಜಗಳೂರು ಎ.ಪಿ.ಎಂ.ಸಿ ಆವರಣ. ಪ್ರತಿ ತಿಂಗಳು 23ನೇ ತಾರೀಖಿನಂದು ನ್ಯಾಮತಿ ಮತ್ತು ಹೊನ್ನಾಳಿ ಎ.ಪಿ.ಎಂ.ಸಿ ಆವರಣದಲ್ಲಿ ಸಾರಿಗೆ ಶಿಬಿರಗಳನ್ನು ನಡೆಸಲಾಗುವುದು ಎಂದು ಸಾರಿಗೆ ಅಧಿಕಾರಿ ಸಿ.ಎಸ್ ಪ್ರಮುತೇಶ್ ತಿಳಿಸಿದ್ದಾರೆ.
ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Watch Video: ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ | Actor Allu Arjun