ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್‌ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಅಲ್ಪಸಂಖ್ಯಾತ ವರ್ಗದವರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.