ಶಿವಮೊಗ್ಗ ; ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ (ಎಸ್‌ಸ್ಸಿ/ಎಸ್‌ಟಿ ಆಗಿದ್ದಲ್ಲಿ), ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ) ಗಳನ್ನು ಲಗತ್ತಿಸಿ ನ. 05 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ