ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು ಮತ್ತು ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.
ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್… pic.twitter.com/hd4JM7XEwg
— DIPR Karnataka (@KarnatakaVarthe) October 5, 2024
‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut