Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM

ಶಿಕ್ಷಕ ಆಕಾಂಕ್ಷಿಗಳೇ ಗಮನಿಸಿ ; 2026ರ ‘CTET’ ನೋಂದಣಿ ಆರಂಭ ; ಡಿಸೆಂಬರ್ 18ರೊಳಗೆ ಅರ್ಜಿ ಸಲ್ಲಿಸಿ!

27/11/2025 5:54 PM

10,000 ರೂಪಾಯಿ ಹೂಡಿಕೆ ಮಾಡಿ, 19 ಕೋಟಿ ಮಾಲೀಕನಾದ ; ಈ 10 ಷೇರುಗಳು ಆತನನ್ನ ಶ್ರೀಮಂತನಾಗಿ ಮಾಡಿದವು!

27/11/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ-ಸಕ್ರಮ : ಅರಣ್ಯ ಭೂಮಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್.!
KARNATAKA

ಅಕ್ರಮ-ಸಕ್ರಮ : ಅರಣ್ಯ ಭೂಮಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್.!

By kannadanewsnow5713/10/2025 7:52 AM

ಶಿವಮೊಗ್ಗ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನಾದಿ ಕಾಲದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ನೀಡುವುದು, ತೊಂದರೆ ಕೊಟ್ಟು ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬಾರದು. ಹಾಗೂ ರೈತರ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ವಯ ನಡೆದುಕೊಳ್ಳಬೇಕೆಂದು ಸಂಬಂಧಿಸಿದ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಹೊಸದಾಗಿ ಒತ್ತುವರಿಗೆ ಅವಕಾಶ ಮಾಡಬಾರದು. ಹಾಗೂ 27-04-1978 ರ ಪೂರ್ವದ ಅರಣ್ಯ ಒತ್ತುವರಿವನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ/ವಸತಿ ಭೂಮಿಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವ ಸಂಬಂಧ ಕೈಗೊಂಡ ಕ್ರಮದ ಕುರಿತು ವರದಿಯನ್ನು ನೀಡಬೇಕೆಂದು ತಿಳಿಸಿದರು.

ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಮಲೆನಾಡಿನ ಭಾಗದಲ್ಲಿ ರೈತನ್ನು ಒಕ್ಕಲೆಬ್ಬಿಸುವ ಸಂಬAಧ ನೋಟಿಸ್ ನೀಡಲಾಗುತ್ತಿದೆ. ಕೆಲವೆಡೆ ತೊಂದರೆ ನೀಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದರು.

ಸಿಸಿಎಫ್ ಹನುಮಂತಪ್ಪ ಮಾತನಾಡಿ, ಪಿಎಫ್ ಮತ್ತು ಎಂಎಫ್ ಪ್ರಕರಣಗಳು ಕಿರು ಅರಣ್ಯ ವ್ಯಾಪ್ತಿಗೆ ಬರುತ್ತವೆ. ಇವುಗಳನ್ನು ಸೆಟ್ಲ್ ಮಾಡಬಹುದು, ಈ ಸಂಬAಧ 375 ಅಧಿಸೂಚನೆಗಳಿವೆ ಎಂದು ತಿಳಿಸಿದರು.

ರಸ್ತೆ ಕಾಮಗಾರಿ ಪೂರ್ಣಗೊಳಿಸಿ : ಸಚಿವರು, ಜಿಲ್ಲೆಯ ಎಲ್ಲ ರಾಜ್ಯ ಹೈವೇಗಳು, ಮುಖ್ಯ ರಸ್ತೆಗಳನ್ನು ನವೆಂಬರ್ ಅಂತ್ಯದೊಳಗೆ ಮತ್ತು ಇತರೆ ಎಲ್ಲ ರಸ್ತೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಪಿಡಬ್ಲುö್ಯಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಳೆ ಮುಗಿದ ತಕ್ಷಣ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು. ಗುಂಡಿಗಳನ್ನು ಮುಚ್ಚುವ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಗುಂಡಿಗಳಿAದಾಗಿ ದ್ವಿಚಕ್ರ ವಾಹನಗಳ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಸಾವು-ನೋವು ಸಂಭವಿಸುತ್ತಿದೆ. ಆದ್ದರಿಂದ ಶೀಘ್ರವಾಗಿ ಗುಂಡಿಗಳನ್ನು ಮುಚ್ಚಬೇಕು ಮತ್ತು ರಸ್ತೆಯ ಎಡ್ಜ್ ಹಾಗೂ ಮಧ್ಯಭಾಗವನ್ನು ಮಾರ್ಕಿಂಗ್ ಮಾಡಬೇಕೆಂದು ಸೂಚಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು. ಹಾಗೂ ಎನ್ಹೆಚ್ ಕಾಮಗಾರಿಗಳನ್ನು ನಿಗದಿತ ವೇಳೆಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದರು.

ನೀರಾವರಿ ಇಲಾಖೆ : ಸೊರಬ ತಾಲ್ಲೂಕಿನ ಗುಡುವಿ, ಯಡಗೊಪ್ಪ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.160 ಕೋಟಿ ಮೊತ್ತದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಬೇಕು. ಹಾಗೂ ಕಾಲುಸಂಕಗಳ ಕಾಮಗಾರಿಯನ್ನು ಸಹ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳ ನಡುವೆ ಸಮನ್ವಯತೆ ಇದ್ದಲ್ಲಿ ಕಾಮಗಾರಿ ಕ್ಷಿಪ್ರಗತಿಯಲ್ಲಿ ಆಗಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಒಂದು ತಂಡದAತೆ ಸಮನ್ವಯದೊಂದಿಗೆ ಕೆಲಸ ಮಾಡಬೇಕೆಂದರು.
ಸೊರಬ ತಾಲ್ಲೂಕು ಮಾವಿನ ಹೊಳೆ, ಕೆರೆಹಳ್ಳಿ, ಜಂಗಿನಕೊಪ್ಪ ಗ್ರಾಮಗಳಲ್ಲಿ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಾಣ ಕಾಮಗಾರಿಗಳ ಕುರಿತು ವರದಿ ಪಡೆದುಕೊಂಡರು.

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಘೋಷಿತವಾಗಿರುವ ಕೊಳಚೆ ಪ್ರದೇಶಗಳ ಕುರಿತು ಪ್ರಗತಿ ಪರಿಶೀಲಿಸಿದ ಸಚಿವರು, ಗ್ರಾಮೀಣ ಭಾಗದ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ ಹಕ್ಕುಪತ್ರ ನೀಡುವುದು ಹಾಗೂ ನಗರ ಪ್ರದೇಶದಲ್ಲಿನ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ 94 ಸಿ ಮತ್ತು ಸಿಸಿ ನೀಡುವ ಕುರಿತು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಶಾಸಕರು, ಸಾಗರದ ಕೊಳಚೆ ಪ್ರದೇಶದಲ್ಲಿನ ಮನೆ ನಿರ್ಮಾಣ ಕಾಮಗಾರಿ ನಿಂತು 12 ವರ್ಷ ಆಯ್ತು. 150 ಮನೆಗಳ ಕೆಲಸ ಬಾಕಿ ಇದ್ದು, ಶೀಘ್ರದಲ್ಲಿ ಈ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದರು.

ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ, ಶಿವಮೊಗ್ಗ ಮಹಾನಗರಪಾಲಿಕೆಯ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಮಹಾನಗರಪಾಲಿಕೆ ಒಡೆತನಕ್ಕೆ ಸೇರಿದ ನಿವೇಶನಗಳಲ್ಲಿ 40 ವರ್ಷಗಳಿಂದ ವಾಸ ಮಾಡುತ್ತಿರುವ ಬಡ ಕುಟುಂಬಗಳ ಮನೆಗಳನ್ನು ಸಕ್ರಮಗೊಳಿಸುವ ಸಂಬAಧ 9000 ಅರ್ಜಿಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಚಿವರು, ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿಸಬೇಕು. ಯುದ್ದೋಪಾದಿಯಲ್ಲಿ ಈ ಕಾರ್ಯ ಕೈಗೊಂಡು ನವೆಂಬರ್ ಅಂತ್ಯದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅಪಘಾತ, ಅನಾಹುತಗಳ ಸಂಖ್ಯೆ ಹೆಚ್ಚಲಿದೆ ಎಂದು ತಿಳಿಸಿದರು. ಸಚಿವರು ಜಿಲ್ಲೆಯಲ್ಲಿ 62 ಪ್ರವಾಸಿ ತಾಣಗಳಿದ್ದು ಈ ಕುರಿತು ಹೋರ್ಡಿಂಗ್, ಮಾಹಿತಿ ಫಲಕಗಳ ಮೂಲಕ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

Good news for farmers cultivating forest land!
Share. Facebook Twitter LinkedIn WhatsApp Email

Related Posts

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM2 Mins Read

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM2 Mins Read

BREAKING: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೀರಿನ ಬಾಕಿ, ಅಸಲು ಏಕಕಾಲದಲ್ಲಿ ಪಾವತಿಸಿದರೆ ‘ಬಡ್ಡಿ ಮನ್ನಾ’

27/11/2025 5:06 PM1 Min Read
Recent News

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM

ಶಿಕ್ಷಕ ಆಕಾಂಕ್ಷಿಗಳೇ ಗಮನಿಸಿ ; 2026ರ ‘CTET’ ನೋಂದಣಿ ಆರಂಭ ; ಡಿಸೆಂಬರ್ 18ರೊಳಗೆ ಅರ್ಜಿ ಸಲ್ಲಿಸಿ!

27/11/2025 5:54 PM

10,000 ರೂಪಾಯಿ ಹೂಡಿಕೆ ಮಾಡಿ, 19 ಕೋಟಿ ಮಾಲೀಕನಾದ ; ಈ 10 ಷೇರುಗಳು ಆತನನ್ನ ಶ್ರೀಮಂತನಾಗಿ ಮಾಡಿದವು!

27/11/2025 5:39 PM

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM
State News
KARNATAKA

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

By kannadanewsnow0927/11/2025 5:55 PM KARNATAKA 2 Mins Read

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನೀರಿನ ಬಾಕಿ,…

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM

BREAKING: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೀರಿನ ಬಾಕಿ, ಅಸಲು ಏಕಕಾಲದಲ್ಲಿ ಪಾವತಿಸಿದರೆ ‘ಬಡ್ಡಿ ಮನ್ನಾ’

27/11/2025 5:06 PM

ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು

27/11/2025 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.