ಬೆಳಗಾವಿ : ರಾಜ್ಯ ಸರ್ಕಾರ ( Karnataka Govt) ‘ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆ’ ಮಂಡಿಸಿದೆ.
ಚಳಿಗಾಲದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಈ ಮಸೂದೆ ಮಂಡಿಸಿದೆ. ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇ ಶದಿಂದ ರಾಜ್ಯ ಸರ್ಕಾರ ‘ಕರ್ನಾಟಕ ಭೂ ಕಂದಾಯ ಮಸೂದೆ’ ಮಂಡಿಸಿದೆ.
ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸಲು ಇದು ಸುಲಭವಾಗಲಿದೆ. ಕೃಷಿ ಭೂಮಿ ನಿವಾಸಿಗಳು ಸಂಪೂರ್ಣವಾಗಿ ಅಥವಾ ಭಾಗವಾಗಿ ಭೂ ಪರಿವರ್ತನೆ ವರ್ಗಾವಣೆ ಮಾಡಬಹುದು.
ಭೂ ಮಾಲೀಕರು ಅರ್ಜಿ ಸ್ವೀಕರಿಸಿದ 15 ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಅರ್ಜಿ ಪರಿಶೀಲಿಸಿ ಅನುಮೋದನೆ ನೀಡಬೇಕು. ಒಂದು ವೇಳೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡುವಲ್ಲಿ ವಿಫಲವಾದರೆ ಸಲ್ಲಿಕೆಯಾದ ಅರ್ಜಿಗೆ ಅನುಮತಿ ನೀಡಲಾಗಿದೆ ಎಂದು ಪರಿಗಣಿಸಬೇಕು ಎಂದು ಈ ಕಾನೂನು ಹೇಳುತ್ತದೆ. ಈ ಮೂಲಕ ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.
BREAKING NEWS : ‘ಕೈ’ ಮುಖಂಡ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ
BIG BREAKING NEWS: ರಾಜ್ಯ ಸರ್ಕಾರದಿಂದ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ