ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗಾಗಿ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಠ ರೂ. 20 ಲಕ್ಷದಿಂದ ಗರಿಷ್ಠ ರೂ. 50 ಲಕ್ಷಗಳವರೆಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮೂಲಕ  (Backended subsidy) ನೀಡಲಾಗುವುದು.

Share.
Exit mobile version