Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 15 ದಿನಗಳಲ್ಲಿ `ಬೆಳೆ ನಷ್ಟ ಪರಿಹಾರ’ ಖಾತೆಗೆ ಜಮಾ.!
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 15 ದಿನಗಳಲ್ಲಿ `ಬೆಳೆ ನಷ್ಟ ಪರಿಹಾರ’ ಖಾತೆಗೆ ಜಮಾ.!

By kannadanewsnow5726/10/2024 11:34 AM
vidhana soudha
vidhana soudha

ದಾವಣಗೆರೆ : ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ. ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ. ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು.

ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದ್ದು ಈಗಾಗಲೇ ಪರಿಹಾರ ನೀಡಲಾಗಿದ್ದು ಕೆಲವೇ ದಿನಗಳಲ್ಲಿ ಮುಂಗಾರು ಬೆಳೆನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದರು.

666 ಕೋಟಿ ಲಭ್ಯ

ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರರ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಶೇ 190 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಅನೇಕ ಕೆರೆ, ಕಟ್ಟೆಗಳು ತುಂಬಿವೆ ಮತ್ತು ಬೆಳೆ ನಷ್ಟ ಉಂಟಾಗಿದೆ. ಬೆಳೆ ನಷ್ಟವಾದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಿರೇಮಲ್ಲನಹೊಳೆ ಗ್ರಾಮದಲ್ಲಿ ಕೆರೆ ಕೋಡಿಯಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿದ್ದರಿಂದ ಇಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ಇಲ್ಲಿರುವ 35 ಮನೆಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಸೂಚಿಸಲಾಗಿದ್ದು ಮನೆ ಪರಿಹಾರದ ಜೊತೆಗೆ ಬೇರೆಡೆ ನಿವೇಶನ ನೀಡಿ ಇವರಿಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಇವರಿಗೆ ಮುಂದಿನ ಎರಡು ತಿಂಗಳಲ್ಲಿ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗಿದೆ. ಮತ್ತು ಇದೇ ಗ್ರಾಮದಲ್ಲಿ ಮನೆಗಳು ಕುಸಿದಿದ್ದು ಈ ಮನೆಗಳಿಗೂ ಪರಿಹಾರದ ಜೊತೆಗೆ ಬದಲಿ ನಿವೇಶನ ಹಾಗೂ ಮನೆ ನಿರ್ಮಾಣ ಮಾಡಿಕೊಡಲು ತಿಳಿಸಲಾಗಿದೆ ಎಂದರು.

Good news for farmers from the state government: Deposit in 'crop loss compensation' account in 15 days! ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 50 ಲಕ್ಷ ರೂ.ವರಗೆ ಸಾಲ ಸೌಲಭ್ಯ
Share. Facebook Twitter LinkedIn WhatsApp Email

Related Posts

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM1 Min Read

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM2 Mins Read

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM1 Min Read
Recent News

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM
State News
KARNATAKA

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

By kannadanewsnow0928/03/2026 10:10 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರತಿಷ್ಠಿತ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಇಂದು ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಗೂ…

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.