ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ 8 ದಿನಗಳಲ್ಲೇ 11ಇ ಸ್ಕೆಚ್ ಜಮೀನಿನ ಹದ್ದುಬಸ್ತು, ತಾತ್ಕಾಲ್ ಪೋಡಿಯನ್ನು ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದರು.
11 ಇ ಸ್ಕೆಚ್ ಜೀಮೀನಿನ ಹದ್ದುಬಸ್ತು, ತತ್ಕಾಲ್ ಪೋಡಿ, ಇ ಸ್ವತ್ತು, ಸ್ವಾವಲಂಭಿ, ಭೂ ಮಂಜೂರಿ ಪ್ರಕರಣಗಳ ಸರ್ವೇ, ಕೆರೆ ಬಂಡಿದಾರಿ ಸರ್ವೇ, ಭೂ ಪರಿವರ್ತನೆ ಸರ್ವೇ, ಕಂದಾಯ ಅರಣ್ಯ ಗಡಿ ನಿಗದಿಗೊಳಿಸುವ ಜಂಟಿ ಸರ್ವೇ, ಇವು ನಮ್ಮ ಇಲಾಖೆಯ ಪ್ರಮುಖ ಕೆಲಸ. ಕಳೆದ 23 ತಿಂಗಳಲ್ಲಿ ಈವರೆಗೆ 26 ಲಕ್ಷ ಸರ್ವೇ ಪ್ರಕರಣಗಳನ್ನು ಜನತೆಗೆ ಮಾಡಿಕೊಟ್ಟಿದ್ದೇವೆ. ಒಂದು ದಿನಕ್ಕೆ ಸರಾಸರಿ 5 ರಿಂದ 6 ಸಾವಿರ ಪ್ರಕರಣಗಳ್ನು ಸರ್ವೇ ಮಾಡಿಕೊಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ನಮ್ಮ ಸರ್ಕಾರ ಬರುವ ಮೊದಲು ಹದ್ದುಬಸ್ತಿಗೆ ಸರಾಸರಿ ಒಂದು ಅರ್ಜಿ ಕೊಟ್ರೆ ಸುಮಾರು 3 ರಿಂದ 6 ತಿಂಗಳಾಗುತ್ತಿತ್ತು. ಆದರೆ ಈಗ ಗರಿಷ್ಟ 8 ದಿನದಲ್ಲಿ ನಮ್ಮ ಸರ್ಕಾರದಲ್ಲಿ ಹದ್ದುಬಸ್ತು ಮಾಡಿಕೊಡುತ್ತಿದ್ದೇವೆ. ಹಾವೇರಿಯಲ್ಲಿ ಒಂದು ಹದ್ದುಬಸ್ತು ಸರ್ವೇಗೆ 2 ವರ್ಷ ಆದರೂ ಆಗಿಲ್ಲ ಎಂದು ಶಾಸಕರೇ ನನ್ನನ್ನು ಪ್ರಶ್ನೆ ಮಾಡಿದ್ರು. ಈ ಬಗ್ಗೆ ನಾನು ವಿಚಾರಿಸಿದಾಗ ಆ ದೂರು ನಿಜವಾಗಿತ್ತು. ನಮ್ಮ ಹಿಂದಿನ ಸಿಎಂ ಹಾವೇರಿ ಜಿಲ್ಲೆಯವರೇ ಆಗಿದ್ದರು. ನಾನು ಇಂದಿನ ಡೇಟಾ ಪ್ರಕಾರ ಹೇಳೋದಾದ್ರೆ 8 ದಿನಕ್ಕೆ ಹದ್ದುಬಸ್ತು ಮತ್ತು ಕೇವಲ ಮೂರು ದಿನಕ್ಕೆ 11ಇ ಸ್ಕೆಚ್ ಮಾಡಿಕೊಡುತ್ತಿದ್ದೇವೆ. ಈ ಮೊದಲು ತಿಂಗಳಾನುಗಟ್ಟಲೆ ಕಾಯಬೇಕಾದ್ದ ಪರಿಸ್ಥಿತಿಯನ್ನು ಬದಲಿಸಿದ್ದೇವೆ ಎಂದರು.
SHOCKING: ವಿದ್ಯಾರ್ಥಿನಿ ‘ಮುಟ್ಟಾಗಿದ್ದಕ್ಕೆ’ ತರಗತಿ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ‘ಪ್ರಾಂಶುಪಾಲ’
ಏಪ್ರಿಲ್.16ರಂದು ವಕ್ಫ್ ಕಾಯ್ದೆ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಸಿಜೆಐ ನೇತೃತ್ವದ ಪೀಠ ವಿಚಾರಣೆ