Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಪಂಪ್‍ಸೆಟ್’ಳಿಗೆ ನಿತ್ಯವೂ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಪಂಪ್‍ಸೆಟ್’ಳಿಗೆ ನಿತ್ಯವೂ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ.!

By kannadanewsnow57

ಚಿತ್ರದುರ್ಗ : ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ನಿತ್ಯವೂ 7 ಗಂಟೆಗಳ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ, ಇದಕ್ಕೆ ಬೇಕಾದ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆ ವಿಷಯಗಳ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರಸ್ತುತ ಯಾವುದೇ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ರಾಜ್ಯದಲ್ಲಿ 19500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಇದಕ್ಕಾಗಿ ಸಬ್ ಸ್ಟೇಷನ್‍ಗಳು ಹಾಗೂ ಟ್ರಾನ್ಸ್‍ಮಿಷನ್ ಕೇಂದ್ರಗಳು ಸಮರ್ಪಕವಾಗಿರಬೇಕು. ಚಿತ್ರದುರ್ಗ ಜಿಲ್ಲೆಗೆ 100 ಸಬ್ ಸ್ಟೇಷನ್‍ಗಳನ್ನು ಕೊಡಲಾಗುತ್ತಿದ್ದು, ಈ ವರ್ಷ 50 ಸಬ್ ಸ್ಟೇಷನ್‍ಗಳು ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಬಾಕಿ 50 ಸಬ್ ಸ್ಟೇಷನ್‍ಗಳು ಕಾರ್ಯಾರಂಭ ಮಾಡಲಿವೆ. ಪ್ರಸ್ತುತ ರೈತರಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಆದೇಶ ಮಾಡಿದ್ದಾರೆ. ಹಾಗಾಗಿ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ಹೊತ್ತಿನಲ್ಲಿ 4 ಗಂಟೆ ಹಾಗೂ ರಾತ್ರಿ ಸಮಯದಲ್ಲಿ 3 ಗಂಟೆ ವಿದ್ಯುತ್ ಪೂರೈಕೆ ಮಾಡಲೇಬೇಕು. ಸಬ್‍ಸ್ಟೇಷನ್‍ಗಳ ಸಮಸ್ಯೆ ಇದ್ದರೆ ಆಯಾ ಶಾಸಕರ ಗಮನಕ್ಕೆ ತಂದು ಸಬ್‍ಸ್ಟೇಷನ್‍ಗಳ ಸಮಸ್ಯೆ ಬಗೆಹರಿಸಿಕೊಂಡು, ಅವಶ್ಯಕತೆ ಇದ್ದರೆ ಹೊಸ ಸಬ್‍ಸ್ಟೇಷನ್‍ಗಳಿಗೆ ಪ್ರಸ್ತಾವ ಸಲ್ಲಿಸಿ, ವಿದ್ಯುತ್ ಪೂರೈಕೆಗೆ ಕ್ರಮವಹಿಸಬೇಕು ಎಂದರು.

ಕೆಪಿಟಿಸಿಎಲ್‍ನ ಸಬ್‍ಸ್ಟೇಷನ್ ಇರುವ ಕಡೆ ಬೆಸ್ಕಾಂನವರು ಲಿಂಕ್‍ಲೈನ್ ವ್ಯವಸ್ಥೆಯನ್ನು ತಕ್ಷಣ ಮಾಡಬೇಕು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ತಿಳಿಸಿದರು.
ಇ-ಆಫೀಸ್ ಅನುಷ್ಠಾನ ಮಾಡಿ: ರೈತರು ಹಾಗೂ ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಕಚೇರಿಗಳಿಗೆ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ಇ-ಆಫೀಸ್ ಅನುಷ್ಠಾನ ಮಾಡುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚನೆ ನೀಡಿದರು. ಕಚೇರಿಗಳಿಗೆ ಸಲ್ಲಿಕೆಯಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

3000 ಹೊಸ ಲೈನ್‍ಮೆನ್‍ಗಳ ನೇಮಕ :
ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಮಾತನಾಡಿ, ಇಂಧನ ಇಲಾಖೆಯಲ್ಲಿ ಲೈನ್‍ಮೆನ್‍ಗಳು ಸೇರಿದಂತೆ ಕೆಳಹಂತದ ಅಧಿಕಾರಿ, ಸಿಬ್ಬಂದಿಗಳು ಬಹಳ ವರ್ಷಗಳಿಂದಲೂ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ಇದರಿಂದಾಗಿ ಹಿರಿಯ ಅಧಿಕಾರಿಗಳ ಮಾತಾಗಲಿ ಅಥವಾ ಜನಪ್ರತಿನಿಧಿಗಳ ಮಾತಿಗೆ ಬೆಲೆ ಕೊಡುತ್ತಿಲ್ಲ. ಹೀಗಾಗಿ ಅಂತಹ ಲೈನ್‍ಮೆನ್ ಹಾಗೂ ಸಿಬ್ಬಂದಿಯನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವುದು ಸೂಕ್ತ. ವಿದ್ಯುತ್ ಪರಿವರ್ತಕಗಳು ಸುಟ್ಟುಹೋದ ಸಂದರ್ಭದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸುತ್ತಿಲ್ಲ, ವಿನಾಕಾರಣ ವಿಳಂಬ ಮಾಡುತ್ತಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಶೀಘ್ರದಲ್ಲಿಯೇ 3000 ಲೈನ್‍ಮೆನ್‍ಗಳನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ, ಹಲವು ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವ ಲೈನ್‍ಮೆನ್‍ಗಳನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇನ್ನು ವಿದ್ಯುತ್ ಪರಿವರ್ತಕಗಳ ಬದಲಾವಣೆ ಸಂಬಂಧಿಸಿದಂತೆ ಈಗಾಗಲೆ ಕೃಷಿ ಪಂಪ್‍ಸೆಟ್‍ಗಳ ಅಕ್ರಮ ಸಕ್ರಮ ಕಾರ್ಯ ಪ್ರಗತಿಯಲ್ಲಿದ್ದು, ಈ ಕಾರ್ಯ ಪೂರ್ಣಗೊಂಡ ಬಳಿಕ, ವಿದ್ಯುತ್ ಪೂರೈಕೆ ಸಾಮಥ್ರ್ಯ ಸಮರ್ಪಕಗೊಂಡು, ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗಳು ಸುಟ್ಟುಹೋಗುವುದು ನಿಯಂತ್ರಣಕ್ಕೆ ಬರಲಿದೆ ಎಂದರು.

ವರ್ಗಾವಣೆಯ ಎಚ್ಚರಿಕೆ :
ಚಿತ್ರಹಳ್ಳಿ, ಚಿಕ್ಕಜಾಜೂರು, ಸಾಸಲು ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ ಸಬ್‍ಸ್ಟೇಷನ್‍ಗಳ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಅಧಿಕಾರಿಗಳಿಂದ ತಪಾಸಣಾ ವರದಿ ನೀಡುವುದು ಬಾಕಿ ಇದೆ. ಕಾಮಗಾರಿ ಪೂರ್ಣಗೊಂಡಿದ್ದರೂ, ಚಿತ್ರದುರ್ಗ ವಿಭಾಗ ಬೆಸ್ಕಾಂ ಕಾರ್ಯಪಾಲಕ ಅಭಿಯಂತರರು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಮಾಡದೆ, ನಿರ್ಲಕ್ಷ್ಯ ತೋರಿದ್ದಾರೆ. 07 ತಾಸು ವಿದ್ಯುತ್ ಪೂರೈಕೆಗೆ ವ್ಯವಸ್ಥ ಮಾಡಿಕೊಡಲು ಅವಕಾಶವಿದ್ದರೂ ಕ್ರಮಕ್ಕೆ ಮುಂದಾಗಿಲ್ಲ ಎಂದು ಸಚಿವರು ಈ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿತ್ರದುರ್ಗ ವಿಭಾಗದಲ್ಲಿ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಗೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತಿಲ್ಲ, ದೂರವಾಣಿ ಕರೆಯನ್ನು ಕೂಡ ಸ್ವೀಕರಿಸುವುದಿಲ್ಲ, ಅಥವಾ ಮೊಬೈಲ್ ಸ್ವಿಚ್ ಆಫ್ ಮಾಡಿಬಿಡುತ್ತಾರೆ. ಇದರಿಂದ ಸಮಸ್ಯೆಗಳ ಪರಿಹಾರವಾಗದೆ ಸಾರ್ವಜನಿಕರು, ರೈತರು, ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಇಂಧನ ಸಚಿವರ ಗಮನಕ್ಕೆ ತಂದರು. ಇದಕ್ಕೆ ದನಿಗೂಡಿಸಿದ ಸಚಿವರು, ನಮಗೂ ಈ ಬಗ್ಗೆ ದೂರುಗಳು ಕೇಳಿಬಂದಿವೆ. ಇಂತಹ ಅಧಿಕಾರಿಗಳ ಕಾರ್ಯ ವೈಖರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಕೂಡಲೆ ವರ್ಗಾವಣೆಗೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Good news for farmers in the state: 7 hours of three-phase power supply to agricultural pump sets daily
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.