ಬೆಂಗಳೂರು : ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಿದೆ.
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಮೊದಲ 2 ಹೆ. ಪ್ರದೇಶದವರೆಗೆ ಶೇ. 90% ಮತ್ತು 3 ಹೆ. ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ಇಲಾಖೆಯಿಂದ ಅನುಮೋದಿತ ಕಂಪನಿಗಳ ಮೂಲಕವೇ ರೈತರು ಸೂಕ್ಷ್ಮ ನೀರಾವರಿ ಘಟಕವನ್ನು ಅಳವಡಿಸಿಕೊಲ್ಳುವುದು. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯುವುದು.
2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಪರಿಶಿಷ್ಟ ಜಾತಿ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವುದು. ಹಾಗೂ 2024-25ನೇ ಸಾಲಿನ ಎಸ್.ಎಂ.ಎ.ಎಂ. ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೂ ಅಡಿಕೆ ದೋಟಿಗಳಿಗೆ ಸಹಾಯಧನ ನೀಡುಲಾಗುವುದು. ಆಸಕ್ತ ರೈತರು ಆಯಾ ಹೋಬಳಿ ರೈತರ ಸಂಪರ್ಕ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವುದು. ಈ ಎಲ್ಲಾ ಯೋಜನೆಗಳಿಗೆ ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.