ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಂದು ಇರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ( Sandalwood Policy-2022 ) ಅನುಮೋದನೆ ನೀಡಲಾಗಿದೆ. ಇದರಿಂದಾಗಿ ರೈತರು ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯ ಬಳಿಕ ಸಂಪುಟ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ರಾಜ್ಯ ಸರ್ಕಾರದಿಂದ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಿದ್ದರಿಂದಾಗಿ ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದಾಗಿದೆ. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆಯಿದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಿದ್ದೇವೆ ಎಂದು ಹೇಳಿದರು.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ