ಬೆಂಗಳೂರು: ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ ಮಳೆಯಾಶ್ರೀತ ಬೆಳೆಗೆ ಪ್ರತಿ ಹೆಕ್ಟೇರ್ಗೆ 8,500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್ಗೆ 17,000 ರೂ.ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ಗೆ 22.500 ರೂ.ಗಳು ನಿಗಧಿಪಡಿಸಲಾಗಿರುತ್ತದೆ.
2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಆರ್ಎಫ್/ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂ.ಗಳ ವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿಯನ್ನು ನೀಡಲಾಗಿರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು.
ರಾಮನಗರ ಜಿಲ್ಲೆಯಲ್ಲಿ 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಡಿಜಿಟಲ್ ಬೆಳೆ ಸಮೀಕ್ಷೆ ಮಾಹಿತಿ ಮತ್ತು ಎಫ್.ಐ.ಡಿ ಹೊಂದಿರುವ ರೈತರ ಮಾಹಿತಿಯನ್ನಾಧರಿಸಿ ಮೊದಲನೇ ಹಂತದಲ್ಲಿ ಗರಿಷ್ಠ 2000 ರೂ.ಗಳಂತೆ ಒಟ್ಟು 65170 ರೈತರಿಗೆ 1161.40 ಲಕ್ಷ ರೂ.ಗಳ ಇನ್ಪುಟ್ ಸಬ್ಸಿಡಿಯನ್ನು ಮೊತ್ತವನ್ನು ಜಮೆ ಮಾಡಲಾಗಿರುತ್ತದೆ.
ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನು ಮೇ 2 ರಂದು ಒಟ್ಟು 40810 ರೈತರಿಗೆ 2038.91 ಲಕ್ಷ ರೂ.ಗಳ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದ್ದು ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ದೂರುಗಳನ್ನು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ ಹಾಗೂ ಸಂಬಂಧಪಟ್ಟ ತಾಲ್ಲೂಕು ಕೃಷಿ ಅಧಿಕಾರಿ/ತಹಶೀಲ್ದಾರ್ ರವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.