ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಮುಂಗಾರು ಬೆಳೆ ಹಾನಿ ಪರಿಹಾರ ಇನಪುಟ್ ಸಬ್ಸಿಡಿ ಬಿಡುಗಡೆಯಾಗಿದೆ.
ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಮುಂದಿನ ಕಂತುಗಳಲ್ಲಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯಲ್ಲಿರುತ್ತದೆ.
ಈಗಾಗಲೇ ಬೆಳೆಪರಿಹಾರ ಮೊತ್ತ ಜಮೆಯಾದ ರೈತರ ಪಟ್ಟಿಯನ್ನು ನಾಡ ಕಚೇರಿ, ಗ್ರಾಮ ಪಂಚಾಯತಿ, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ. ಅಲ್ಲದೇ, ಎಲ್ಲಾ ತಹಶೀಲ್ದಾರ ಕಛೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.