ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೃಷಿ ಭಾಗ್ಯ ಯೋಜನೆಯನ್ನು ಪುನಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಲಾಭ ಪಡೆಯಲು ಆಸಕ್ತ ರೈತರು ಕೃಷಿ ಇಲಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.