ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ.
ಸೋಲಾರ್ ಆಧರಿತ 3 ಹೆಚ್‌ಪಿ ಸೋಲಾರ್ ಪಂಪ್‌ಸೆಟ್‌ಗಳಿಗೆ 2 ಲಕ್ಷವಾದರೆ ಶೇ.50 %ರಂತೆ 1 ಲಕ್ಷ ರೂಪಾಯಿ ಸಹಾಯಧನ ಸಿಗಲಿದೆ. 3 ಹೆಚ್‌ಪಿ ಸೋಲಾರ್ ಗಿಂತ ಮೇಲ್ಪಟ್ಟ ಸೋಲಾರ್ ಪಂಪ್‌ಸೆಟ್‌ಗಳಿಗೆ 3 ಲಕ್ಷ ಖರ್ಚಿಗೆ 1.5ಲಕ್ಷ ರೂಪಾಯಿ ಸಹಾಯಧನ ದೊರೆಯಲಿದೆ.
ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ.ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಸೌರ ಪಂಪ್ಸೆಟ್ ಬಳಕೆಯಿಂದ ಸುಮಾರು 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ.
ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ.
ಅನಧಿಕೃತ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವ (UNIP) ಯೋಜನೆಯಡಿ ರೂ. 50 ಗಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ರೈತರು ಅರ್ಜಿ ನೋಂದಾಯಿಸಿದ್ದರೆ, ಇಂಥವರ ನೀರಾವರಿ ಪಂಪ್ಸೆಟ್ಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ನೋಂದಣಿ ಹೇಗೆ?
ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.
ರೈತರ ನೋಂದಣಿ ಸಮಸ್ಯೆ ಪರಿಹರಿಸಲು ಕ್ರೆಡಲ್ನಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಲು ಕೋರಿದೆ.