ಬಳ್ಳಾರಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ 10 ಹೆಚ್ ಪಿ ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಮಾಡಲ್ಲ ಅಂತ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ.
ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜದ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ ಗಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ ಗಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ 10 ಅಶ್ವಶಕ್ತಿಗಿಂತ ಹೆಚ್ಚು ಸಾಮರ್ಥ್ಯದ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ ಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿಗೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ ಗಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ ಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ ಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಿವಮೊಗ್ಗ: ಜುಲೈ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut