ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.
ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್‌ಗಳನ್ನು ಪ.ಜಾ/ಪ.ಪಂ ರೈತರಿಗೆ 90% ಸಬ್ಸಿಡಿಯಲ್ಲಿ ಮತ್ತು ಸಾಮಾನ್ಯ ರೈತರಿಗೆ 50% ಸಬ್ಸಿಡಿಯಲ್ಲಿ ವಿತರಿಸಲಾಗುತ್ತದೆ.
ಉದ್ದೇಶಗಳು
ಕೂಲಿ ಕಾರ್ಮಿಕರ ಕೊರತೆಯನ್ನು ಪೂರೈಸಲು ಮತ್ತು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಲ್ಲಿ ಪರಿಶ್ರಮವನ್ನು ಕಡಿಮೆಗೊಳಿಸುವುದು.
ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹ, ಸಮಯವನ್ನು ಉಳಿಸಲು ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರದೇಶವನ್ನು ಆವರಿಸುವುದು.
ಕೃಷಿ ಚಟುವಟಿಕೆಗಳ ಸಮರ್ಥತೆಯನ್ನು ಹೆಚ್ಚಿಸುವುದರ ಮೂಲಕ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ರೈತರ ಆದಾಯವನ್ನು ಹೆಚ್ಚಿಸುವುದರ ಮೂಲಕ ಕೃಷಿಯನ್ನು ಲಾಭದಾಯಕವನ್ನಾಗಿ ಮಾಡುವುದು.
ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಲ್ಲಿ ಪರಿಶ್ರಮವನ್ನು ಕಡಿಮೆ ಮಾಡಲು ಮತ್ತು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮತ್ತು ಸಮಯಕ್ಕೆ ಸರಿಯಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಕೃಷಿ ಉಪಕರಣಗಳು/ಯಂತ್ರೋಪಕರಣಗಳನ್ನು ಖರೀದಿಸಲು ಸಹಾಯಧನವನ್ನು ಒದಗಿಸುವ ಮೂಲಕ ರೈತರಿಗೆ ಸಹಾಯ ಮಾಡುವುದು.
ಕೃಷಿ ಸಂಸ್ಕರಣಾ ಘಟಕಗಳ ಬಳಕೆಯಿಂದ ಧಾನ್ಯದ ನಷ್ಟ ಪ್ರಮಾಣವನ್ನು ಕಡಿಮೆ ಮಾಡುವುದು ಹಾಗೂ ಆರೋಗ್ಯಕರ ಆಹಾರ ಧಾನ್ಯಗಳನ್ನು ಪಡೆಯುವುದು.
ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಖಾತರಿಪಡಿಸುವುದು ಮತ್ತು ರೈತರ ಆದಾಯದಲ್ಲಿ ಹೆಚ್ಚಳ.









