Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಯುದ್ಧ ವಲಯಕ್ಕೆ ಲಗ್ಗೆ ಇಟ್ಟ ಅಮೆರಿಕದ ಭೀಕರ ಯುದ್ಧನೌಕೆ ‘ಯುಎಸ್ಎಸ್ ಬಾಕ್ಸರ್’: 2,500 ಮರೀನ್ ಸೈನಿಕರ ನಿಯೋಜನೆ

21/03/2026 6:54 AM

ಆಧಾರ್ ಆ್ಯಪ್ ಕಡ್ಡಾಯವಿಲ್ಲ: ಗೊಂದಲಕ್ಕೆ ತೆರೆ ಎಳೆದ UIDAI | Aadhaar App

21/03/2026 6:47 AM

ವಿಶ್ವದ ಪ್ರವಾಸಿ ತಾಣಗಳಿಗೂ ಇರಾನ್ ಭೀತಿ: ಅಮೆರಿಕ ಸೇನಾ ಜಮಾವಣೆ ಬೆನ್ನಲ್ಲೇ ತಹರನ್‌ನಿಂದ ಎಚ್ಚರಿಕೆ

21/03/2026 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 2 ತಿಂಗಳಲ್ಲಿ ಅರ್ಹರಿಗೆ `ಭೂಮಿ’ ಮಂಜೂರು!
KARNATAKA

ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 2 ತಿಂಗಳಲ್ಲಿ ಅರ್ಹರಿಗೆ `ಭೂಮಿ’ ಮಂಜೂರು!

By kannadanewsnow5707/10/2024 10:00 AM

ಬೆಂಗಳೂರು : “ಬಗರ್ ಹುಕುಂ” ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದರು.

ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

“ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ “ಬಗರ್ ಹುಕುಂ” ಅರ್ಜಿ ಆಹ್ವಾನಿಸಲಾಯಿತು. ಅಲ್ಲದೆ, ಕಳೆದ ಒಂದು ವರ್ಷದಿಂದ ಸ್ವತಃ ನಾನು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತಾ, ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ, ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

ಮುಂದುವರೆದು, “ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗಿರುವ ಸಮಸ್ಯೆ ಏನು? ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಬಹುಪಾಲಿವೆ. ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು, ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.

ಅರ್ಹರ ಗ್ರ್ಯಾಂಟ್ ಗೆ ವಿಳಂಬ ಬೇಡ

ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ, ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ, ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.

‘ವಿಎ’ ಗಳನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳಿಸಬೇಡಿ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳುಹಿಸಬೇಡಿ ಎಂದು ತಹಶೀಲ್ದಾರರಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು ಮಾಡಿದರು.

“ಈಗಾಗಲೇ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುವು ಎಂದು ತಹಶೀಲ್ದಾರ್ ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೆ ತಿಳಿಯುತ್ತದೆ. ಹೀಗಾಗಿ ಈ ಕೆಲಸವನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಳಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರಿಗೆ ಅನಗತ್ಯವಾಗಿ ಕೆಲಸ ನೀಡಬೇಡಿ. ಅನರ್ಹ ಅರ್ಜಿಗಳ ಪರಿಶೀಲನೆಗಾಗಿ ಅವರನ್ನು ಫೀಲ್ಡ್ ಗೆ ಕಳುಹಿಸಬೇಡಿ” ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಅವರು ಉಪಸ್ಥಿತರಿದ್ದರು.

Good news for farmers: State govt allocates 'land' to deserving in 2 months ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್!
Share. Facebook Twitter LinkedIn WhatsApp Email

Related Posts

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM1 Min Read

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM2 Mins Read

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read
Recent News

ಇರಾನ್ ಯುದ್ಧ ವಲಯಕ್ಕೆ ಲಗ್ಗೆ ಇಟ್ಟ ಅಮೆರಿಕದ ಭೀಕರ ಯುದ್ಧನೌಕೆ ‘ಯುಎಸ್ಎಸ್ ಬಾಕ್ಸರ್’: 2,500 ಮರೀನ್ ಸೈನಿಕರ ನಿಯೋಜನೆ

21/03/2026 6:54 AM

ಆಧಾರ್ ಆ್ಯಪ್ ಕಡ್ಡಾಯವಿಲ್ಲ: ಗೊಂದಲಕ್ಕೆ ತೆರೆ ಎಳೆದ UIDAI | Aadhaar App

21/03/2026 6:47 AM

ವಿಶ್ವದ ಪ್ರವಾಸಿ ತಾಣಗಳಿಗೂ ಇರಾನ್ ಭೀತಿ: ಅಮೆರಿಕ ಸೇನಾ ಜಮಾವಣೆ ಬೆನ್ನಲ್ಲೇ ತಹರನ್‌ನಿಂದ ಎಚ್ಚರಿಕೆ

21/03/2026 6:41 AM

ಬದಲಾಗಲಿದೆ ಆದಾಯ ತೆರಿಗೆ ವ್ಯವಸ್ಥೆ: ಏ.1ರಿಂದ ಹೊಸ ನಿಯಮ ಜಾರಿ – ತೆರಿಗೆದಾರರ ಮೇಲೆ ಏನೆಲ್ಲಾ ಪ್ರಭಾವ?

21/03/2026 5:30 AM
State News
KARNATAKA

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

By kannadanewsnow0920/03/2026 10:12 PM KARNATAKA 1 Min Read

ಬೆಂಗಳೂರು: ಕಲಬುರಗಿಯ ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ…

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.