ಬೆಂಗಳೂರು : ರಾಜ್ಯದ ತೊಗರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಸರ್ಕಾರ, ತೊಗರಿ ಖರೀದಿ ನೋಂದಣಿ ಅವಧಿಯು ಮಾರ್ಚ್ ತಿಂಗಳಾಂತ್ಯದವರೆಗೆ ಅಂದರೆ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
ಈ ಕುರಿತು ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಶಿವಾನಂದ್ ಪಾಟೀಲ್ ಮಾತನಾಡಿ, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೊಂದಣಿ ಅವಧಿಯನ್ನು ಮಾರ್ಚ್ 31 ವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಸಹಕಾರ ಕಂಪನಿ, ಹುಟ್ಟುವಳಿ ಸಹಕಾರ ಸಂಘಗಳಲ್ಲಿ ರೈತರು ನೋಂದಣಿ ಮಾಡಿಕೊಳ್ಳಬೇಕು.
ಕೇಂದ್ರ ಸರ್ಕಾರ ಕ್ವಿಂಟಲ್ ಗೆ ರೂ. 7550 ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ಕೂಡ 450 ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು. ಕೆಲವು ಕಡೆ ರಾಜ್ಯದ ಪ್ರೋತ್ಸಾಹ ಧನ ಬಿಲ್ ನಲ್ಲಿ ಸೇರ್ಪಡೆ ಆಗುತ್ತಿಲ್ಲ. ಈ ಕುರಿತು ದೂರುಗಳು ಬಂದಿದ್ದು ಅದನ್ನು ಪರಿಶೀಲನೆ ಮಾಡುತ್ತೇವೆ. ರೈತರಿಗೆ ಪ್ರತಿ ಕುಂಟಲ್ ಗೆ ರೂ. 8,000 ಪಾವತಿಗೆ ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದರು.