ಬೆಂಗಳೂರು : ಬೆಳೆ ನಷ್ಟವಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಉಳಿದ 2 ಲಕ್ಷ ರೂ. ಪಾವತಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಜಮೀನುಗಳಲ್ಲಿ ಬೆಳೆ ನಷ್ಟ ವಾಗಿರುವ ರೈತರುಗಳಿಗೆ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲಾಗಿದೆ. ಉಳಿಕೆ 2 ಲಕ್ಷ ರೂ.ಗಳನ್ನು ಪಾವತಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸಭಾ ಅಧಿವೇಶನದಲ್ಲಿ ಸದಸ್ಯರಾದ ಜಿ.ಹೆಚ್.ಶ್ರೀನಿವಾಸ್ ರವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಭದ್ರಾ ಜಲಾಶಯದಿಂದ ತರೀಕೆರೆ ಏತ ನೀರಾವರಿ ಯೋಜನೆಗಾಗಿ ಮತ್ತು ವಾಣಿವಿಲಾಸ ಸಾಗರ ಜಲಾಶಯಕ್ಕೆ ಹೆಬ್ಬೂರು ಹಳ್ಳದ ಮೂಲಕ ನೀರನ್ನು ಹರಿಸಿದ್ದರಿಂದ ರೈತರ ಜಮೀನುಗಳಲ್ಲಿ ಬೆಳೆಗಳು ನಷ್ಟವಾಗಿದ್ದು, ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಪಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಉಪ ಮುಖ್ಯಮಂತ್ರಿಗಳು, ಕಾಮಗಾರಿಗಾಗಿ 4.75 ಲಕ್ಷ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.