ಬೆಂಗಳೂರು : ಬರಗಾಲದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ಜೂನ್ ಜೂನ್ 10ರ ಬಳಿಕ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ. ಜೂನ್ 10ರ ಬಳಿಕ ಮುಂಗಾರು ಪ್ರವೇಶಿಸಲಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.