ಬೆಂಗಳೂರು: ರಾಜ್ಯದ ಮೀನುಗಾರರಿಗೆ ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು ರೂ.3000ಕ್ಕೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.
ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀಗಿದೆ 7 ಕೋಟಿ ರೂ ನೀಡಲಾಗುತ್ತದೆ. ವಿವಿಧ ವಸತಿ ಯೋಜನೆಗಳಡಿ 10000 ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದರು.