ಬೆಂಗಳೂರು: ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಹಿಂದೆ ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ₹8 ಲಕ್ಷಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ” ಎಂದು ಘೋಷಣೆ ಮಾಡಿದರು.
“ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಸಮೀಕ್ಷೆ ಪ್ರಕಾರ 99% ಮೀನುಗಾರರು ಆರ್ಥಿಕವಾಗಿ ಹಿಂದುಳಿದಿದ್ದು, ಈ ಮೀನುಗಾರರ ರಕ್ಷಣೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನು ಮಾರಾಟ ಮಾಡಲು ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಹಂಚಲಾಗಿದೆ” ಎಂದು ತಿಳಿಸಿದರು.
ಮುರಿದೋದ ಡೆಸ್ಕ್, ಎಲ್ಲೆಲ್ಲೂ ಗಲೀಜ್, ಕರೆಂಟ್ ಶಾಕ್: ಇದು ‘ಸಾಗರದ ಪ್ರತಿಷ್ಠಿತ ಕಾಲೇಜಿನ ದುಸ್ಥಿತಿ’
‘ಸಾಗರ ಗ್ರಾಮಾಂತರ ಠಾಣೆ’ಯ ಪೊಲೀಸರ ಭರ್ಜರಿ ಕಾರ್ಯಾಚರಣೆ: 24 ಗಂಟೆಯಲ್ಲೇ ‘ರಾಬರಿ ಆರೋಪಿ’ ಸುಳಿವು ಪತ್ತೆ, ಅರೆಸ್ಟ್