ಬೆಂಗಳೂರು: ರಾಜ್ಯದ ಅರಣ್ಯ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಅಧಿವೇಶನದಲ್ಲಿ ಭೂಮಿ ಹಕ್ಕು ಖಾತ್ರಿಪಡಿಸಲು ನಿರ್ಣಯ ಮಂಡನೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಇಂದು ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು.
24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಬುಡಕಟ್ಟು ಸಮುದಾಯ ಅಭಿವೃದ್ಧಿ
ರಾಜ್ಯದ 5ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್ ಯೋಜನೆ ಜಾರಿಯಲ್ಲಿದೆ.
ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು, 6871 ಕುಟುಂಬಗಳಿಗೆ ಮಾತ್ರ ಮನೆಯಿದೆ. 12ಸಾವಿರ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸ್ಥಳ ಗುರುತಿಸಿ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಗುರುತಿನ ಚೀಟಿ ಸಮಸ್ಯೆಯನ್ನು ಬಗೆಹರಿಸಬೇಕು. ಈ ಜನಾಂಗಗಳ ಅಭಿವೃದ್ಧಿಗೆ 9 ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಯೋಜನೆಗಳಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಅನುಷ್ಠಾನ ಮಾಡಬೇಕು ಎಂದು ಸೂಚನೆ ನೀಡಿದರು.
ಬೆಂಗಳೂರಿಗೇ ಹುಷಾರ್: ಎಲ್ಲೆಂದರಲ್ಲಿ ಕಸ ಎಸೆದ್ರೆ ನಿಮ್ಮ ಮೇಲೆ ‘ಕೇಸ್ ಫಿಕ್ಸ್’
BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: MLC ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ | Suraj Revanna