ಬೆಂಗಳೂರು : ರಾಜ್ಯ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಕ್ತಿ, ಗೃಹ ಯೋಜನೆಗೆ ಜೊತೆಗೆ ಪುನರ್ವಸತಿ ಯೋಜನೆಯಡಿ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು 3 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಗ್ಯಾರಂಟಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು 3 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ ಟೆಂಡರ್ ಸರ್ಟಿಫಿಕೇಷನ್ ವತಿಯಿಂದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಹೊಂದಿದ ಲಿಂಗತ್ವ ಅಲ್ಪಸಂಖ್ಯಾತರು ಮಾಸಿಕ 2000 ರೂ. ಮೈತ್ರಿ ಯೋಜನೆ ಅಡಿ ಮಾಸಿಕ 1,200 ಪಿಂಚಣಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.