Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ 
KARNATAKA

GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ 

By kannadanewsnow0921/12/2025 6:35 AM

ಬೆಂಗಳೂರು: 2025-26ನೇ ಸಾಲಿಗೆ ಶುಚಿ ಕಾರ್ಯಕ್ರಮದ ಅಡಿಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಗಳನ್ನು ಜಿಲ್ಲಾ ಹಂತದಲ್ಲಿಯೇ ಖರೀದಿಸಲು ಮತ್ತು ವಿತರಣೆ ಮಾಡಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ನೋಂದಾಯಿಸಲಾದ ಎಲ್ಲಾ ಹದಿಹರೆಯದ ಹೆಣ್ಣು ಮಕ್ಕಳಿಗೆ ವಿತರಿಸಲು 2,35,74,084 ಯೂನಿಟ್ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು (ಒಂದು ಯೂನಿಟ್ = 10 ಪ್ಯಾಡ್‌ಗಳು) ಪ್ರತಿ ಯುನಿಟ್‌ಗೆ ಅಂದಾಜು ರೂ.30.47/- ರಂತೆ ಒಟ್ಟು ರೂ.71.83 (ಎಪ್ಪತ್ತೊಂದು ಕೋಟಿ ಎಂಭತ್ತ ಮೂರು ಲಕ್ಷ ರೂಪಾಯಿಗಳು ಮಾತ್ರ) ಕೋಟಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (ಕೆಎಸ್‌ಎಂಎಸ್‌ಸಿಎಲ್‌) ಮೂಲಕ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದಿದ್ದಾರೆ.

ಶುಚಿ ಕಾರ್ಯಕ್ರಮಕ್ಕೆ 2025-26ನೇ ಸಾಲಿಗೆ ಲೆ.ಶೀ.2210-01- 200-0-11 ರಡಿ 1, 2 ಮತ್ತುನ 3ನೇ ತ್ರೈಮಾಸಿಕ ಕಂತಿನ ಅನುದಾನವಾಗಿ ಒಟ್ಟು ರೂ.15.00 ಕೋಟಿಗಳನ್ನು ಬಿಡುಗಡೆಗೊಳಿಸಲಾಗಿರುತ್ತದೆ. ಸರಕು ಹಾಗೂ ಸೇವೆಗಳ ಸಂಗ್ರಹಣೆಗೆ ರೂ.10.00 ಕೋಟಿಗಳ ವರೆಗೆ ಆರ್ಥಿಕ ಇಲಾಖೆಯ ಅನುಮೋದನೆ ಇದೆಯೆಂದು ಭಾವಿಸಿ ಆಡಳಿತಾತ್ಮಕ ಅನುಮೋದನೆಯನ್ನು (ಕೆ.ಟಿ.ಪಿ.ಪಿ. ನಿಯಮಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಹಾಗೂ ಆಯವ್ಯಯ ಲಭ್ಯತೆಗೊಳಪಟ್ಟು) ಇಲಾಖಾ ಕಾರ್ಯದರ್ಶಿಯವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಗಳನ್ನು ವಿತರಿಸಲು ಆಗಸ್ಟ್ 2025 ರಿಂದ ದಾಸ್ತಾನು ಕೊರತೆ ಇರುವುದಾಗಿ ಹಾಗೂ KSMSCL ನಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಸರಬರಾಜು ಪ್ರಾರಂಭವಾಗುವವರವಿಗೂ ಮಧ್ಯಂತರ ಅವಧಿಗೆ 6 ರಿಂದ 10ನೇ ತರಗತಿ ಹಾಗೂ ಪದವಿಪೂರ್ವ ಹೆಣ್ಣು ಮಕ್ಕಳು ಒಟ್ಟು 19,64,507 ಹದಿಹರೆಯದ ಹೆಣ್ಣು ಮಕ್ಕಳಿಗೆ 3 ತಿಂಗಳ ಅವಧಿಗೆ ಸ್ಯಾನಿಟರಿ ನ್ಯಾಪ್ಲಿನ್ ಪ್ಯಾಡ್‌ಗಳನ್ನು ಅಂದಾಜು ಮೊತ್ತ ರೂ. 101147 ಲಕ್ಷಗಳಲ್ಲಿ ಕೆಳಕಂಡಂತೆ ಜಿಲ್ಲಾ ಹಂತದಲ್ಲಿ ಖರೀದಿಸಿ, ವಿತರಣೆ ಮಾಡಲು ಆಯುಕ್ತರು, ಆಕುಕ (ಸೇವೆಗಳು) ಇವರು ಕೋರಿರುತ್ತಾರೆ ಎಂದಿದ್ದಾರೆ.

ವಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಸಾಲಿಗೆ ಶುಚಿ ಕಾರ್ಯಕ್ರಮದಡಿ 5 ರಿಂದ 10ನೇ ತರಗತಿ ಹಾಗೂ ಪದವಿಪೂರ್ವ ಹೆಣ್ಣು ಮಕ್ಕಳು ಒಟ್ಟು 19,64,507 ಹದಿಹರೆಯದ ಹೆಣ್ಣು ಮಕ್ಕಳಿಗೆ 3 ತಿಂಗಳ ಅವಧಿಗೆ ಅಗತ್ಯವಿರುವ ಸ್ಯಾನಿಟರಿ ಪ್ಯಾಡ್‌ಗಳನ್ನು ರೂ. 10.00 ಕೋಟಿಗಳಲ್ಲಿ ಆಯಾ ಜಿಲ್ಲೆಗಳ ಹಂತದಲ್ಲಿ ಸ್ಥಳೀಯ ಸಂಗ್ರಹಣೆಯನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 3 ಟಿ.ಎಫ್.ಪಿ 2025, ದಿನಾಂಕ: 24.09.2025 ರಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ನೀಡಲಾಗಿರುವ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.