ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರು ಸೇರಿದಂತೆ ತತ್ಸಮಾನ ವೃಂದದ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿಯನ್ನು ಪ್ರಕಟಿಸಿ, ಆದೇಶಿಸಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಅಧಿಕೃತ ಜ್ಞಾಪನ ಹೊರಡಿಸಿದ್ದು, 2023-24ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡವು ಬಗ್ಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಎಂದಿದ್ದಾರೆ.
ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಇದ್ದ ಪ್ರಯುಕ್ತ ಕೌನ್ಸಿಲಿಂಗ್ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸುವ ಕುರಿತಂತೆ ಪ್ರಸ್ತುತ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದ್ದಾರೆ.
ಹೀಗಿದೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹುದ್ದೆಗಳಿಗೆ ಆಯ್ಕೆದಾ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸುವ ಕುರಿತು ವೇಳಾಪಟ್ಟಿ
‘ನಟ ದರ್ಶನ್’ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯೋ?: ನಟಿ ರಮ್ಯಾ | Actor Darshan
‘ಮಾತು ಬರುತ್ತಿಲ್ಲ, ದರ್ಶನ್ಗಾಗಿ ಪ್ರಾರ್ಥಿಸುತ್ತೇನೆ’:ಆಘಾತ ಹೊರಹಾಕಿದ ನಟಿ ಸಂಜನಾ ಗಲ್ರಾನಿ | Darshan Arrest