ಬೆಂಗಳೂರು: ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ( Government School ) ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ.
ಅವರು ಇಂದು ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಆಯೋಜಿಸಿರುವ “ 50 ಹಾಸಿಗೆ ಸಾಮಥ್ರ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪಕೇಂದ್ರ”ದ ಹಾಗೂ “ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾ ಘಟಕದ ಉಪಕೇಂದ್ರ”ದ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು ತಲಾ 7-8 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳನ್ನು, ಬೆಡ್ ಗಳನ್ನು ಹೆಚ್ಚಿಸಲಾಗುವುದು. ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಮೊದಲೇ ಇದ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಟೆಲಿಮೆಡಿಸಿನ್ ಗೆ ಜೋಡಣೆ ಮಾಡುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.
ಟೆಲಿಮೆಡಿಸಿನ್ ಮೂಲಕ ಪ್ರಾದೇಶಿಕ ಹಂತದಲ್ಲಿ, ವೈದ್ಯರ ತಂಡವೊಂದು 24×7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ತಿಳಿಸಿದರು.