ನವದೆಹಲಿ: ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಶೀಘ್ರದಲ್ಲೇ ಸಿಬ್ಬಂದಿ ಆಯ್ಕೆ ಆಯೋಗ(Staff Selection Commission)ವು 15, 247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದೆ. ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಈ ಪತ್ರಗಳನ್ನು ನೀಡಲಾಗುವುದು. ಈ ಬಗ್ಗೆ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಟ್ವೀಟ್ ಮಾಡಿದೆ.
More employment opportunities in Government of India as #SSC to soon complete process for issuance of appointment letters for 15,247 posts; letters to be issued by different departments in the next couple of months.
1/n
— PIB India (@PIB_India) June 19, 2022
PIB 42,000 ನೇಮಕಾತಿಗಳನ್ನು ಡಿಸೆಂಬರ್ 2022 ರ ಮೊದಲು ಪೂರ್ಣಗೊಳಿಸಬೇಕು ಎಂದು ತಿಳಿಸಿದೆ. SSC ತನ್ನ ಮುಂಬರುವ ಪರೀಕ್ಷೆಗಳಿಗೆ 67,768 ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲು ಯೋಜನೆಗಳನ್ನು ರೂಪಿಸಲಾಗಿದೆ ಎನ್ನಲಾಗಿದೆ.
‘ಅಗ್ನಿಪಥ್’ ಯೋಜನೆಗೆ ಸಂಬಂಧಿಸಿದಂತೆ ದೇಶವು ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಈ ಸುದ್ದಿಯು ವಿಶೇಷವಾಗಿದೆ. ಪ್ರಕಟಣೆಯ ಪ್ರಕಾರ, ಮುಂಬರುವ ತಿಂಗಳುಗಳಲ್ಲಿ ವಿವಿಧ ಇಲಾಖೆಗಳಿಂದ ನೀಡಲಾಗುವ 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳ ವಿತರಣೆಯನ್ನು SSC ಪ್ರಕ್ರಿಯೆಗೊಳಿಸುತ್ತದೆ.
ಇದು ಖಂಡಿತವಾಗಿಯೂ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ನೈತಿಕತೆಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ನಂಬುತ್ತಾರೆ. ಏಕೆಂದರೆ, ಈ ಎಲ್ಲಾ ಖಾಲಿ ಹುದ್ದೆಗಳನ್ನು ವರ್ಷಾಂತ್ಯದ ಮೊದಲು ಭರ್ತಿ ಮಾಡಲು ನಿರ್ಧರಿಸಲಾಗಿದೆ.