ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ.
ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಹಾಗೂ ಗ್ರೇಡ್ 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ.
ಕಡ್ಡಾಯ ಮತ್ತು ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಶೇ.9, ಪತಿ-ಪತ್ನಿ ಶೇ. 2, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವ ಒಂಟಿ ಮಹಿಳೆ ಅಥವಾ ಒಂಟಿ ಪಾಲಕರ ಪ್ರಕರಣ ಅಥವಾ ದೈಹಿಕವಾಗಿ ಅವಲಂಬಿತ ಪತಿ, ಪತ್ನಿ ಹೊಂದಿರುವ ನೌಕರರು, ಅಂಗವಿಕಲತೆಯ ಮಾನದಂಡ ಮಟ್ಟವುಳ್ಳ ನೌಕರರ ವರ್ಗಾವಣೆ ಮೀತಿಗೊಳಿಸಿದೆ.