ಹಾಸನ: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇಂದು ಹಾಸನಾಂಬೆ ದೇವಿ ದರ್ಶನದ ಸಂದರ್ಭದಲ್ಲಿ ಸರದಿ ಸಾಲಿನಲ್ಲಿದ್ದಂತ ಸಾರ್ವಜನಿಕರು ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬುದಾಗಿ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದಂತ ಅವರು, ಜುಲೈ ತಿಂಗಳವರೆಗಿನ ಹಣ ಈಗಾಗಲೇ ಕ್ಲಿಯರ್ ಆಗಿದೆ ಎಂದರು.
ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ತಿಳಿಸಿದರು.
BIG NEWS: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು