ಧಾರವಾಡ : ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು.
ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು.
ಸರಕಾರದ ಅಭಿವೃದ್ದಿ ಯೋಜನೆಗಳನ್ನು ಸಮುದಾಯ, ವ್ಯಕ್ತಿಗಳಿಗೆ ಮುಟ್ಟಿಸಬೇಕು. ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿ, ಗುರಿ ನೀಡಲಾಗಿದೆ. ಸರಕಾರದಿಂದ ಹಂತಹಂತವಾಗಿ ಅನುದಾನವೂ ಬಿಡುಗಡೆ ಆಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಇಲಾಖಾ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಫೆಬ್ರವರಿ ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲಿ ಫಲಾನುಭವಿಗಳ ಸಮಾವೇಶ ಮಾಡಲು ನಿರ್ದರಿಸಲಾಗಿದೆ. ತಹಶೀಲ್ದಾರ ಮತ್ತು ತಾಲೂಕಾ ಪಂಚಾಯತ ಇಓ ಅವರನ್ನು ನೊಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಉತ್ತಮ ರೀತಿಯಲ್ಲಿ ಕಾರ್ಯಕ್ರಮವನ್ನು ಸಂಘಟಿಸಬೇಕು. ಜಿಲ್ಲಾಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕಾಗಿ ಅವರ ದಿನಾಂಕ ಕೇಳಲಾಗಿದೆ ಎಂದು ಸಚಿವರು ತಿಳಿಸಿದರು.
ಬರುವ ಜನವರಿ 31 ರಂದು ಕುಂದಗೋಳದಲ್ಲಿ, ಫೆಬ್ರವರಿ 2 ರಂದು ಹುಬ್ಬಳ್ಳಿಯಲ್ಲಿ ಮತ್ತು ಫೆಬ್ರವರಿ 5 ರಂದು ಧಾರವಾಡದಲ್ಲಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಪಲಾನುಭವಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಆಯಾ ತಾಲೂಕಿನ ತಹಶೀಲ್ದಾರ ಮತ್ತು ಇಓ ಅವರ ನೇತೃತ್ವದಲ್ಲಿ ಸಮಾವೇಶದ ಸಿದ್ದತೆ ಆರಂಭಿಸಿ, ನಿಗದಿತ ದಿನಂಕಗಳಂದು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹ್ಮದ್ ರೋಷನ್ ವೇದಿಕೆಯಲ್ಲಿದ್ದರು.
ಸಭೆಯಲ್ಲಿ ಇಲಾಖೆ ಯೋಜನೆಗಳು ಮತ್ತು ಫಲಾನುಭವಿಗಳ ಕುರಿತು ಹೆಸ್ಕಾಂ ಧಾರವಾಡ ಗ್ರಾಮೀಣ ಇಇ ಎಂ.ಟಿ.ದೊಡ್ಡಮನಿ, ಶಹರ ಇಇ ಎಂ.ಎಂ.ನದಾಫ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಟೀಲ ಶಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣಕುಮಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ.ಬದ್ರಣ್ಣವರ, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಸ್ಮಾರ್ಟ ಸಿಟಿ ಯೋಜನೆ ವ್ಯವಸ್ಥಾಪಕ ರುದ್ರೇಶ ಗಾಳಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ. ರವಿ ಸಾಲಿಗೌಡರ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಇಇ ಸೊಪ್ಪಿಮಠ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್., ಕೌಶಲ್ಯಾಭಿವೃದ್ಧಿ ಇಲಾಖೆ ಜಿಲ್ಲಾ ಅಧಿಕಾರಿ ಚಂದ್ರಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಗೋಪಾಲ ಲಮಾಣಿ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿ, ಫಲಾನುಭವಿಗಳ ಕುರಿತು ಮಾತನಾಡಿ, ಯೋಜನೆಗಳ ಪ್ರಗತಿ ತಿಳಿಸಿದರು.
ಬಿಆರ್‍ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಭಜಂತ್ರಿ, ಕೆಯುಐಡಿಎಫ್‍ಸಿ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಕಾರ್ಯನಿರ್ವಾಹಕ ಅಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ಎಲ್ಲ ತಾಲೂಕುಗಳ ತಹಸಿಲ್ದಾರರು, ತಾ.ಪಂ.ಇಓಗಳು, ಇತರ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Covid19 Update: ರಾಜ್ಯದಲ್ಲಿಂದ 103 ಜನರಿಗೆ ಕೊರೋನಾ, 134 ಮಂದಿ ಗುಣಮುಖ
BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್