ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದಿದೆ.
ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ.
ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆ ಗೆ ಒಳಪಡಲಿದ್ದಾರೆ .ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರ್ಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ.
BREAKING : ಪೊಲೀಸರಿಂದ ಅಕ್ರಮವಾಗಿ ‘IPL’ ಟಿಕೆಟ್ ಮಾರಾಟ ದಂಧೆ ಪ್ರಕರಣ : ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್
BREAKING : ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ : ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರುಪಾಲು!