Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಗೌರವಧನ ಹೆಚ್ಚಳ
KARNATAKA

Good News: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಗೌರವಧನ ಹೆಚ್ಚಳ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ಗುಡ್ ನ್ಯೂಸ್ ಅನ್ನು ಸಚಿವ ಮಧು ಬಂಗಾರಪ್ಪ ನೀಡಿದ್ದಾರೆ. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು. ಅತಿಥಿ ಶಿಕ್ಷಕರು / ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ 2025 ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಎಸ್.ಮಧು ಬಂಗಾರಪ್ಪ

ಬೆಳಗಾವಿ ಸುವರ್ಣವಿಧಾನಸೌಧ : ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ವಿಧಾನ ಪರಿಷತನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಸಂಬಂಧಿಸಿದ ಇಲಾಖೆಯು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಚಿವರಾದ ಮಧು ಬಂಗಾರಪ್ಪ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 16ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತಾ) ನಿಯಮಗಳು 1957ರ ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್ ಮಾಹೆಯಲ್ಲಿ ಬರೆದ ಪತ್ರದಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಧಾರವಾಡ ಮತ್ತು ಕಲಬುರಗಿಯ ಅಪರ ಆಯುಕ್ತರಿಗೆ ಹಾಗೂ ಪದವಿ ಪೂರ್ವ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.