ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕೆಸಿಆರ್ ನಿಯಮದಡಿ ಶಿಕ್ಷಣಾಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡೋದಕ್ಕೆ ಕೌನ್ಸಿಲಿಂಗ್ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ 04-08-2022ರಂದು ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ 32ರಡಿ ಸ್ವತಂತ್ರ ಪ್ರಭಾರದಲ್ಲಿರಿಸಲು ಅನುವಾಗುವಂತೆ, ಕೌನ್ಸಿಲಿಂಗ್ ಮೂಲಕ ಭರ್ತಿ ಮಾಡಲು ಶೈಕ್ಷಣಿಕ ಆಡಳಿತ ಹಿತದೃಷ್ಠಿಯಿಂದ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಈ ಕೌನ್ಸಿಲಿಂಗ್ ಪ್ರಕ್ರಿಯೆಗೆ ಅರ್ಹ ಅಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ದಿನಾಂಕ 23-08-2022ರಂದು ಬೆಳಿಗ್ಗೆ 10.30ಕ್ಕೆ ಶಿಕ್ಷಕರ ಸದನ, ಕೆಜಿ ರಸ್ತೆ, ಬೆಂಗಳೂರು ಇಲ್ಲಿ ನಡೆಯಲಿರುವ ಕೌನ್ಸಿಲಿಂಗ್ ಪ್ರಕ್ರಿಯೆಗೆ ಕಡ್ಡಾಯವಾಗಿ ಹಾಜರಾಗುವಂತೆ ತಿಳಿಸಿದ್ದಾರೆ.
BIGG NEWS: ಇಯರ್ ಫೋನ್ ಹಾಕಿಕೊಂಡು ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಸಾವು