ಬಳ್ಳಾರಿ : ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.
ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಕಂಪ್ಲಿ ಪಟ್ಟಣದ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. ಈ ಹಿಂದೆ ವಿವಿಧ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನವಿದ್ದು, ಫೆಬ್ರವರಿ ತಿಂಗಳಲ್ಲಿ ಹಂತ ಹಂತವಾಗಿ ಮನೆ ವಿತರಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅನುದಾನದ ಕೊರತೆ ಇಲ್ಲ. ಅದೇರೀತಿಯಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ. ಬಡಜನರ ಕಲ್ಯಾಣಕ್ಕಾಗಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
ಅಲ್ಪಸAಖ್ಯಾತ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ 3200 ಕೋಟಿ ರೂ. ನೀಡಲಾಗಿದೆ. ಈ ಪೈಕಿ 1620 ಕೋಟಿ ರೂ. ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಹಲವು ವಷÀðಗಳಿಂದ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ದೊರೆಯುತ್ತಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಆಶಾಭಾವನೆಯಿಂದ ನನ್ನ ಕ್ಷೇತ್ರದ ಅಭಿವೃದ್ಧಿಗೆ 100 ರೂ. ಕೋಟಿ ನೀಡಿದ್ದಾರೆ. ಜನಪರ ಕಲ್ಯಾಣ ಯೋಜನೆಗಳನ್ನು ಕೈಗೊಂಡು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಡಿ ಅನುದಾನ ಹಂಚಿಕೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತ ಸಮಗ್ರ ಚಿತ್ರಣ ವಿವರಿಸಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆಯಿದೆ ಎಂದು ಸುಳ್ಳು ಹೇಳುತ್ತಿದ್ದರು. ಆದರೆ ಈ ಭಾಗದ ಕಂಪ್ಲಿ ಶಾಸಕರ ಇಚ್ಛಾಶಕ್ತಿಯಿಂದ ಕ್ಷೇತ್ರದ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪಡೆದಿರುವ ಅನುದಾನವೇ ನಿದರ್ಶನವಾಗಿದೆ ಎಂದು ಸ್ಪಷ್ಟಪಡಿಸಿದರು.
ಶಾಸಕ ಗಣೇಶ್ ಅವರು, ಈ ಭಾಗದ ಜನರ, ರೈತರ ಪರ ಕಾಳಜಿ ಹೊಂದಿದವರು; ಹಾಗಾಗಿ ಅವರನ್ನು ಈ ಭಾಗದ ಭಗೀರಥ ಎಂದೇ ಕರೆಯುತ್ತಾರೆ ಎಂದು ಶಾಸಕ ಭರತ್ ರೆಡ್ಡಿ ಅವರು ವರ್ಣಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಡಿ ಆಯ್ಕೆಯಾದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆದೇಶ ಪತ್ರ, ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹುಮಾಯೂನ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಪ್ರಮೋದ್, ತಹಶೀಲ್ದಾರ ಶಿವರಾಜ, ಕಂಪ್ಲಿ ಮತ್ತು ಕುರುಗೋಡು ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ