ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅವಳಿ ನಗರದಲ್ಲಿ 1,300 ಮನೆಗಳನ್ನು ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರಾದ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅವಳಿ ನಗರದಲ್ಲಿ 1,300 ಮನೆಗಳನ್ನು ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವರಾದ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.#homeforhomeless #Home @BZZameerAhmedK pic.twitter.com/9my7pLkMXv
— DIPR Karnataka (@KarnatakaVarthe) April 14, 2025
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟ ವಾಗಿ ಮನೆಗಳು ಅರ್ಧ ಕ್ಕೆ ನಿಂತಿತ್ತು. ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಫಲಾನುಭವಿಗಳ ವಂತಿಗೆ ತಲಾ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಹೇಳಿದರು.