ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ʼಸರ್ವರಿಗೂ ಸೂರುʼ ಯೋಜನೆಯಡಿ ಬಡ ಕುಟುಂಬಗಳಿಗೆ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42,345 ಮನೆಗಳನ್ನು ಏಪ್ರಿಲ್ 27 ರಂದು ಹುಬ್ಬಳ್ಳಿಯಲ್ಲಿ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವರಾದ @BZZameerAhmedK ತಿಳಿಸಿದ್ದಾರೆ. pic.twitter.com/ZUkxTB4paP
— DIPR Karnataka (@KarnatakaVarthe) April 3, 2025
ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟ ವಾಗಿ ಮನೆಗಳು ಅರ್ಧ ಕ್ಕೆ ನಿಂತಿತ್ತು. ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಫಲಾನುಭವಿಗಳ ವಂತಿಗೆ ತಲಾ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಹೇಳಿದರು.
`SSLC, PUC’ ಪಾಸಾದ ಯುವಕ/ಯುವತಿಯರಿಗೆ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ಗೆ ಅರ್ಜಿ ಆಹ್ವಾನ
BIG NEWS: ಸಾಗರದಲ್ಲಿ ಬಹುಕೋಟಿ ‘ಸೇಲ್ಸ್ ಸರ್ಟಿಫಿಕೇಟ್’ ಹಗರಣ: ತನಿಖೆಗೆ ಸಚಿವರಿಗೆ ‘ಶಾಸಕ ಗೋಪಾಕೃಷ್ಣ ಬೇಳೂರು’ ಪತ್ರ