ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತ ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 38,000 ಮನೆ ಹಂಚಿಕೆಗೆ ಸಿದ್ಧತೆ ನಡೆಸಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಹೇಳಿದ್ದಾರೆ.
ಸೋಮವಾರ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗೆ ಎರಡನೇ ಹಂತದಲ್ಲಿ 38,000 ಮನೆಗಳನ್ನು ಜುಲೈ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಹಂಚಿಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1,80,253 ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ೩೬,೭೮೯ ಮನೆಗಳನ್ನು ಸಿಎಂ ಸಿದ್ದರಾಮಯ್ಯ ಹಂಚಿಕೆ ಮಾಡಿದ್ದರು, ಇದೀಗ ಎರಡನೇ ಹಂತದಲ್ಲಿ 38,000 ಮನೆ ಮುಖ್ಯಮಂತ್ರಿಯವರಿಂದಲೇ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.