ಬೆಂಗಳೂರು : ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮುಖ್ಯಮಂತ್ರಿಯವರ 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಎಸ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಐಐಎಫ್ಎಲ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್ ಗಳನ್ನು ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು 1 ಲಕ್ಷ ಮನೆ ಯೋಜನೆಯಡಿ ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು, ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.