ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.24ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ವಿದ್ಯಾರ್ಥಿಗಳಿಗೆ ಕೆ ಎಸ್ ಎಸ್ ಟಿಸಿ ತನ್ನ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 24-06-2024 ರಿಂದ 05-07-2024 ರವರೆಗೆ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ-3 ನಡೆಯಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ: 24-06-2024 ರಿಂದ 05-07-2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷೆ-3 ರ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಸೂಚಿಸಿದ್ದಾರೆ.

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು
ಕ್ರಮ ವಹಿಸುವಂತೆ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING : ʻCBSEʼ ಕಂಪಾರ್ಟ್ಮೆಂಟ್ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಈ ರೀತಿ ಚೆಕ್‌ ಮಾಡಿಕೊಳ್ಳಿ

ʻಡಿ ಬಾಸ್‌ʻ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ : ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಹೊಸ ಬಾಂಬ್!

Share.
Exit mobile version