Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

ಪಪ್ಪಾಯಿ ಹಣ್ಣು ಎಲ್ಲರಿಗೂ ಅಲ್ಲ! ಈ 5 ಸಮಸ್ಯೆಯುಳ್ಳವರು ಅಪ್ಪಿ ತಪ್ಪಿಯೂ ತಿನ್ನಬೇಡಿ

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro
KARNATAKA

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ನಡೆಯುವಂತ ಐಪಿಎಲ್ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಅದೇ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಐಪಿಎಲ್ ಪಂದ್ಯಾವಳಿಗಳಂದು ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ದಿನಾಂಕ 28ನೇ ಮಾರ್ಚ್ 2026ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾಅವದಿಯನ್ನು ವಿಸ್ತರಿಸಿದೆ ಎಂದಿದೆ.

ಪಂದ್ಯದ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ:

 ವೈಟ್‌ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ.

ಬೊಮ್ಮಸಂದ್ರ ದಿಂದ ರಾತ್ರಿ 01.00ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ.

ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್), ಐಪಿಎಲ್ ಟಿಕೆಟ್ ಮೇಲೆಯೇ ಮುದ್ರಿತವಾಗಿರುತ್ತದೆ ಅಥವ ಡಿಜಿಟಲ್ ಐಪಿಎಲ್ ಟಿಕೆಟ್‌ಗಳೊಂದಿಗೆ ಲಭ್ಯವಿರುತ್ತದೆ.

ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ /ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ ಭಾಗದಿಂದ ಪ್ರವೇಶ / ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚಿಸಲಾಗಿದೆ.

ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ಎರಡು ಚಕ್ರ ವಾಹನಗಳಿಗೆ ರೂ. 30/- ಮತ್ತು ಕಾರುಗಳಿಗೆ ರೂ. 60/- ನಿಗದಿತ ದರದಲ್ಲಿ ಒದಗಿಸಲಾಗುತ್ತದೆ. ಈ ದರವು ಆ ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾನ್ಯವಾಗಿರುತ್ತದೆ. (ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ನಿಲ್ದಾಣದ ವಿವರಗಳು ಅನುಬಂಧದಲ್ಲಿ ಲಭ್ಯವಿವೆ).

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ. ಇದರಿಂದ ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಸಹಾಯವಾಗುತ್ತದೆ.

ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆ ಮತ್ತು ಜನಸಂದಣಿಯನ್ನು ತಪ್ಪಿಸಲು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್‌ಸಿಎಲ್ ಸಿಬ್ಬಂದಿಯ ನಿರ್ದೇಶನಗಳನ್ನು ಅನುಸರಿಸಲು ವಿನಂತಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಯಾವುದೇ ಅನಾಹುತಗಳು ಅಥವಾ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿತದೃಷ್ಟಿಯಿಂದ, ಅಗತ್ಯವಿದ್ದಲ್ಲಿ ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ನಿಯಂತ್ರಿಸುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ಹಕ್ಕನ್ನು ಬಿಎಂಆರ್‌ಸಿಎಲ್ ಹೊಂದಿರುತ್ತದೆ.

ಸಾರ್ವಜನಿಕರ ಮತ್ತು ಮೆಟ್ರೋ ಪ್ರಯಾಣಿಕರ ಅನೂಕೂಲಕ್ಕಾಗಿ ಈ ಮಾಹಿತಿಯನ್ನು ವ್ಯಾಪಕ ಪ್ರಚಾರವನ್ನು ನೀಡಲು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ವಿನಂತಿಸಿದೆ.

ಹೆಚ್ಚುವರಿ ವಾಹನ ಪಾರ್ಕಿಂಗ್‌ಗಾಗಿ ಗುರುತಿಸಲಾದ ಮೆಟ್ರೋ ನಿಲ್ದಾಣಗಳ ಪಟ್ಟಿ

ಕ್ರ.ಸಂ ಮೆಟ್ರೋ ನಿಲ್ದಾಣ ಕ್ರ.ಸಂ ಮೆಟ್ರೋ ನಿಲ್ದಾಣ
1 ವೈಟ್‌ಫೀಲ್ಡ್ (ಕಾಡುಗೋಡಿ) 23 ಚಿಕ್ಕಬಿದರಕಲ್ಲು
2 ಹೋಪ್ ಫಾರ್ಮ್ ಚನ್ನಸಂದ್ರ 24 ಮಂಜುನಾಥನಗರ
3 ಕಾಡುಗೋಡಿ ಟ್ರೀ ಪಾರ್ಕ್ 25 ನಾಗಸಂದ್ರ
4 ಪಟ್ಟಂದೂರು ಅಗ್ರಹಾರ 26 ಜಾಲಹಳ್ಳಿ
5 ನಲ್ಲೂರಳ್ಳಿ 27 ಮಹಾಲಕ್ಷ್ಮಿ
6 ಕುಂದಲಹಳ್ಳಿ 28 ಮಹಾಕವಿ ಕುವೆಂಪು ರಸ್ತೆ
7 ಸೀತಾರಾಮ ಪಾಳ್ಯ 29 ಶ್ರೀರಾಂಪುರ
8 ಹೂಡಿ 30 ಚಿಕ್ಕಪೇಟೆ
9 ಸಿಂಗಯ್ಯನಪಾಳ್ಯ 31 ನ್ಯಾಷನಲ್ ಕಾಲೇಜು
10 ಕೆ.ಆರ್. ಪುರ 32 ಲಾಲ್‌ಬಾಗ್
11 ಬೈಯಪ್ಪನಹಳ್ಳಿ (ಒಎಂಆರ್ ಭಾಗ) 33 ಜಯನಗರ
12 ಬೈಯಪ್ಪನಹಳ್ಳಿ (ಎನ್‌ಜಿಇಎಫ್ ಭಾಗ) 34 ಬನಶಂಕರಿ
13 ಎಸ್.ವಿ. ರಸ್ತೆ 35 ಯಲಚೇನಹಳ್ಳಿ
14 ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) 36 ದೊಡ್ಡಕಲ್ಲಸಂದ್ರ
15 ಸಿಟಿ ರೈಲ್ವೆ ನಿಲ್ದಾಣ 37 ಆರ್.ವಿ. ರಸ್ತೆ
16 ಹೊಸಹಳ್ಳಿ 38 ರಾಗಿಗುಡ್ಡ
17 ಮೈಸೂರು ರಸ್ತೆ 39 ಬಿಟಿಎಂ ಲೇಔಟ್
18 ನಾಯಂಡಹಳ್ಳಿ 40 ಸೆಂಟ್ರಲ್ ಸಿಲ್ಕ್ ಬೋರ್ಡ್
19 ಜ್ಞಾನಭಾರತಿ 41 ಇನ್ಫೋಸಿಸ್ ಫೌಂಡೇಶನ್ ಕೋನಪ್ಪನ ಅಗ್ರಹಾರ
20 ಕೆಂಗೇರಿ ಬಸ್ ಟರ್ಮಿನಲ್ 42 ಎಲೆಕ್ಟ್ರಾನಿಕ್ ಸಿಟಿ
21 ಚಲ್ಲಘಟ್ಟ 43 ಬಯೋಕಾನ್ ಹೆಬ್ಬಗೋಡಿ
22 ಮಾದಾವರ 44 ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

1 Min Read

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

1 Min Read

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

2 Mins Read
Recent News

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

ಪಪ್ಪಾಯಿ ಹಣ್ಣು ಎಲ್ಲರಿಗೂ ಅಲ್ಲ! ಈ 5 ಸಮಸ್ಯೆಯುಳ್ಳವರು ಅಪ್ಪಿ ತಪ್ಪಿಯೂ ತಿನ್ನಬೇಡಿ

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

ಪಾಟ್ನಾ ಕೋಚಿಂಗ್ ಸೆಂಟರ್ ಹೊರಗೆ ದಾಂಧಲೆ ಮತ್ತು ಗುಂಡಿನ ದಾಳಿ ಪ್ರಕರಣ; ಖಾನ್ ಸರ್ ವಿರುದ್ಧವೇ FIR ದಾಖಲು

State News
KARNATAKA

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಸರ್ಜರಿ ನಡೆಸಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ (DC) ಸೇರಿದಂತೆ ಇಬ್ಬರು ಪ್ರಮುಖ…

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.